ಕುಡಿಯುವ ನೀರಿನ ಬವಣೆ ನೀಗಿಸಲಿದೆಯೇ ‘ವಾಟರ್‌ಸೀರ್’?

ಜಯತೀರ‍್ತ ನಾಡಗವ್ಡ.

water-seer-1

ವಿಶ್ವಸಂಸ್ತೆಯ ಅಂಕಿ ಸಂಕೆಗಳು ಹೇಳುವಂತೆ ದಿನಕ್ಕೆ ಸುಮಾರು 9 ಸಾವಿರ ಮಂದಿ ಚೊಕ್ಕಟವಾದ ಕುಡಿಯುವ ನೀರಿನ ಕೊರತೆಯಿಂದ ಸಾಯುತ್ತಿದ್ದಾರಂತೆ. ಜಗತ್ತಿನ ಬಹುತೇಕ ಬಾಗ ನೀರಿನಿಂದ ಆವರಿಸಿದ್ದರೂ, ಅದರಲ್ಲಿ ಕುಡಿಯಲು ತಕ್ಕುದಾಗಿರುವುದು ತೀರಾ ಕಡಿಮೆ. ಕುಡಿಯುವ ನೀರಿನ ಕೊರತೆ ಮತ್ತು ಅದರಿಂದ ಆಗುತ್ತಿರುವ ಸಾವು-ನೋವುಗಳ ಕಂಡು ಈಗಾಗಲೇ ಸಾಕಶ್ಟು ಸಂಗ ಸಂಸ್ತೆಗಳು ಇದನ್ನು ಹೋಗಲಾಡಿಸಲು ಕೆಲಸ ಮಾಡುತ್ತಿವೆ. ಕುಡಿಯುವ ನೀರನ್ನು ಹಸನಾಗಿಸಲು ಇಂತ ಸಂಸ್ತೆಗಳು ಹೊಸ ಹೊಸ ಚಳಕಗಳನ್ನು ಕಂಡು ಹಿಡಿಯುತ್ತಿವೆ.

ವಾರ‍್ಕಾ ವಾಟರ್ ಎಂಬ ಹೊಸ ಚಳಕವೊಂದರ ಬಗ್ಗೆ ಹಿಂದೊಮ್ಮೆ ಓದಿದ್ದೀರಿ. ಅದನ್ನೇ ಹೋಲುವ ಇನ್ನೊಂದು ನೀರು ಹಸನಾಗಿಸುವ ಎಣಿಯೊಂದು(Device) ಹೊರಬಂದಿದೆ. ಅದೇ ವಾಟರ್ ಸೀರ‍್(WaterSeer). ಮಿಂಚಿನ ಕಸುವು ಬಳಸದೇ ಕಡಿಮೆ ವೆಚ್ಚದಲ್ಲಿ ನೀರು ಹಸನಾಗಿಸುವ ಎಣಿಯೇ ವಾಟರ್ ಸೀರ್. ವಿಸಿ ಲ್ಯಾಬ್ಸ್ (VICI Labs) ಹೆಸರಿನ ಅಮೇರಿಕಾದ ಕೂಟ, ಕ್ಯಾಲಿಪೋರ‍್ನಿಯಾದ ಬರ‍್ಕಲಿ ಕಲಿಕೆವೀಡು(UC Berkeley) ಮತ್ತು ನ್ಯಾಶನಲ್ ಪೀಸ್ ಕಾರ‍್ಪ್ಸ್ ಅಸೋಸಿಯೇಶನ್ (National Peace Corps Association)ಎಂಬ ಸಂಗಟನೆಗಳು ಒಟ್ಟಾಗಿ ಈ ಕೆಲಸಕ್ಕೆ ಕೈ ಹಾಕಿವೆ.

ವಾಟರ್ ಸೀರ್ ಎಣಿಯು ಒಂದು ಗಾಳಿದೂಡುಕ(Turbine), ಒಂದು ಬೀಸಣಿಗೆ(Fan) ಮತ್ತು ಆವಿ ಇಂಗಿಸುವ ಗೂಡುಗಳನ್ನು(Condensation Chamber) ಹೊಂದಿದೆ. ವಾಟರ್ ಸೀರ್ ಎಣಿಯನ್ನು ಗಾಳಿಯಾಡುವ ಬಯಲು ಜಾಗದಲ್ಲಿ 6 ರಿಂದ 8 ಅಡಿಗಳವರೆಗೆ ನೆಡಬೇಕಾಗುತ್ತದೆ. ಎಣಿಯ ಮೇಲ್ಬಾಗದಲ್ಲಿ ಜೋಡಿಸಲಾಗಿರುವ ಸುರುಳಿಯಾಕಾರದ ಗಾಳಿದೂಡುಕ, ಸುತ್ತಮುತ್ತಲೂ ಬೀಸುವ ಗಾಳಿಯನ್ನು ಒಳದೂಡುತ್ತಿರುತ್ತದೆ. ಇದರಿಂದ ಒಳಬಾಗದ ಬೀಸಣಿಗೆ ತಿರುಗುತ್ತ, ಬೆಚ್ಚನೆಯ ಗಾಳಿಯನ್ನು ನೆಲದಡಿ ನೆಡಲಾಗಿರುವ ಆವಿ ಇಂಗಿಸುವ ಗೂಡಿಗೆ ಸಾಗಿಸುತ್ತದೆ. ಆವಿ ಇಂಗಿಸುವ ಗೂಡಿನಲ್ಲಿ ಕೂಡಿಕೊಂಡ ಬೆಚ್ಚನೆಯ ಗಾಳಿ, ಸುತ್ತಲಿನ ನೆಲದಡಿಯ ತಂಪಿನ ವಾತಾವರಣದಿಂದ ಇಂಗಿಸಲ್ಪಟ್ಟು ನೀರಿನ ಹನಿಗಳಾಗಿ ಮಾರ‍್ಪೂಡುತ್ತವೆ. ಗೂಡಿನಲ್ಲಿ ಇದೇ ರೀತಿ ನೀರು ಕೂಡಿಡಲ್ಪಟ್ಟು, ಬೇಕೆಂದಾಗ ಈ ನೀರನ್ನು ಕೊಳವೆ (Hose) ಮತ್ತು ಎತ್ತುಕದ(Pump) ಮೂಲಕ ಕೊಡ, ಕ್ಯಾನ್‌ಗಳಲ್ಲಿ ತುಂಬಿಸಿಕೊಂಡು ಕುಡಿಯಲು ಬಳಕೆ ಮಾಡಬಹುದು. ಈ ಏರ‍್ಪಾನಟಿನಲ್ಲಿ ಮಿಂಚಿನ ಕಸುವು ಬೇಕಿಲ್ಲ, ಇದನ್ನು ನೆಟ್ಟಜಾಗದಲ್ಲಿ ಯಾವಾಗಲೂ ಗಾಳಿ ಬೀಸುತ್ತಿರಬೇಕೆಂಬ ಅಗತ್ಯವೂ ಇಲ್ಲ. ಇರುಳಿನಲ್ಲೂ ಇದು ಕೆಲಸ ಮಾಡಬಲ್ಲುದು. ಈಗಾಗಲೇ ಇದರ ಮಾದರಿಯನ್ನು ತಯಾರಿಸಿ, ಮೊದಲ ಹಂತದ ಒರೆಹಚ್ಚುವ ಕೆಲಸಗಳು ಸಾಗಿವೆ. 9 ಅಡಿ ಆಳಕ್ಕೆ ನೆಡಲಾಗಿದ್ದ ಈ ಚಿಕ್ಕ ಎಣಿಯ ಮಾದರಿಯೊಂದು 11 ಗ್ಯಾಲನ್ ಅಂದರೆ ಸುಮಾರು 37 ಲೀಟರ‍್‌ಗಳಶ್ಟು ಹಸನಾದ ಕುಡಿಯುವ ನೀರನ್ನು ಒದಗಿಸಿದ್ದು, ಅರಕೆಗಾರರ ಕೆಲಸಕ್ಕೆ ಹುರುಪು ಹೆಚ್ಚಿಸಿದೆ.

waterseer2

ಇನ್ನೂ ಕೆಲವೇ ತಿಂಗಳುಗಳಲ್ಲಿ ಪೂರ‍್ಣ ಪ್ರಮಾಣದ ವಾಟರ್ ಸೀರ್ ಎಣಿ ತಯಾರಿಸಿ, ನೆಲದಾಳದಿ ನೆಟ್ಟು ನೀರು ಒದಗಿಸುವ ಕೆಲಸಕ್ಕೆ ಅಣಿಗೊಳ್ಳಲಿದ್ದೇವೆಂದು ವಾಟರ್ ಸೀರ್ ಕೂಟ ಹೇಳಿಕೊಂಡಿದೆ. ಯಾವುದೇ ಎಸಕದ ವಸ್ತುಗಳು, ಕಲಬೆರಕೆ ಇಲ್ಲದ ನೀರನ್ನು ವಾಟರ್ ಸೀರ್ ಮೂಲಕ ಪಡೆದುಕೊಳ್ಳಬಹುದು. ವಾತಾವರಣ ಬೆಚ್ಚನೆಯ ಗಾಳಿ ಮತ್ತು ನೆಲದಡಿಯ ತಂಪು ವಾತಾವರಣಗಳ ನಡುವಿರುವ ಬಿಸುಪುಗಳ ಅಂತರವೇ ಈ ಕುಡಿಯಲು ತಕ್ಕುದಾದ ನೀರಿನ ಹನಿಗಳನ್ನು ಉಂಟುಮಾಡಲಿದೆ. ಇಂಗಿಸುವ ಗೂಡಿಗೆ ಸೋಸುಕ ಜೋಡಿಸಿರುವುದರಿಂದ ಯಾವುದೇ ತೆರನಾದ ಕಸ, ದೂಳು, ನಂಜುಳುಗಳು ನೀರಿನಲ್ಲಿ ಸೇರಿಕೊಳ್ಳುವ ಸಾದ್ಯತೆಯೇ ಇಲ್ಲವಂತೆ. ನೀರಿನ ಬಟ್ಟಿ ಇಳಿಸುವಿಕೆಯ ಮೂಲಕ ಚೊಕ್ಕಟಗೊಳಿಸಿ ಪಡೆದ ನೀರಿನಶ್ಟೇ, ವಾಟರ್ ಸೀರ‍್‌ನಿಂದ ಹೊರಬರುವ ನೀರು ಚೊಕ್ಕಟವಾಗಿರಲಿದೆಯಂತೆ.
ಈ ಮೊದಲು ಬಂದ ನೀರು ಹಸನಾಗಿಸುವ ಏರ್‍ಪಾಟುಗಳು ಹೆಚ್ಚಿನ ಮಿಂಚು ಪಡೆದೋ, ಇಲ್ಲವೇ ಇತರೆ ಕಸುವಿನ ಸೆಲೆ ಬಳಸಿ ನೀರನ್ನು ಹಸನಾಗಿಸುತ್ತಿದ್ದವು. ಆದರೆ ವಾಟರ್ ಸೀರ್ ಇಂತ ಯಾವುದೇ ಕಸುವಿನ ಸೆಲೆಗಳನ್ನು ಬಳಸದೇ, ಇತರೆ ಏರ‍್ಪಾ ಟುಗಳಿಗಿಂತ ಹೆಚ್ಚು ಅಳವುತನ ಹೊಂದಿರಲಿದೆಯಂತೆ. ಬಿಸಿಲಿರುವ ಜಾಗ ಇಲ್ಲವೇ ವಾತಾವರಣಗಳಲ್ಲಿ ಅಡೆತಡೆಯಿಲ್ಲದೇ ಕೆಲಸ ಮಾಡುವ ವಾಟರ್ ಸೀರ್, ತಂಪು ಹೆಚ್ಚಿರುವ ಜಾಗಗಳಲ್ಲೂ ಅಡೆತಡೆಯಿಲ್ಲದೇ ಕೆಲಸ ಮಾಡುವಂತೆ ಅದಕ್ಕೆ ತಕ್ಕ ಮಾರ‍್ಪಾುಟು ಮಾಡಿ, 2017ರ ಪೆಬ್ರುವರಿಯಲ್ಲಿ ಮಂದಿ ಬಳಸಲ್ಲ ಮೊದಲ ವಾಟರ್ ಸೀರ್ ಹೊರಬರಲಿದೆ.

ಒಂದೇ ಜಾಗದಲ್ಲಿ ಹಲವು ವಾಟರ್ ಸೀರ್ ಎಣಿಗಳನ್ನು ನೆಟ್ಟು ಅವುಗಳ ಮೂಲಕ ಹೊರಬರುವ ನೀರನ್ನು ಒಟ್ಟಿಗೆ ಕೊಳವೊಂದರಲ್ಲಿ ಸೇರಿಸಿ ಚಿಕ್ಕ ಹಳ್ಳಿಗಳ ಮಂದಿಯ ನೀರಿನ ಬವಣೆ ನೀಗಿಸಬಹುದು. 134 ಅಮೇರಿಕನ್ ಡಾಲರ‍್‌ಗಳಶ್ಟು ಅಗ್ಗದ ಬೆಲೆಯ (ಸುಮಾರು 9200 ರೂಪಾಯಿಗಳು) ಈ ಎಣಿಯನ್ನು ನಡೆಸಿಕೊಂಡು ಹೋಗುವ ವೆಚ್ಚವೂ ಕಡಿಮೆ ಎಂದು ವಾಟರ್ ಸೀರ್ ಕೂಟ ಹೇಳಿಕೊಂಡಿದೆ. ಅಂದಹಾಗೆ ಈ ಹಮ್ಮುಗೆ ಮಂದಿ ದೇಣಿಗೆ (Crowd Funding) ಪಡೆದುಕೊಂಡು ತಯಾರಾಗುತ್ತಿದೆ. ಹಸನಾದ ಕುಡಿಯುವ ನೀರಿನ ಕೆಲಸಕ್ಕೆ ಪೇಸ್‌ಬುಕ್ ಮುಂತಾದ ಸಾಮಾಜಿಕ ಕೂಡುತಾಣಗಳ ಮೂಲಕ ಪ್ರಚಾರ ನೀಡಿ ಮಂದಿ ದೇಣಿಗೆ ನೀಡಲಾಗುತ್ತಿದೆ. ಆದಶ್ಟು ಬೇಗ ಇಂತಹ ಒಳ್ಳೆಯ ಕೆಲಸಗಳು ಗೆಲುವು ಕಂಡು ಕುಡಿಯುವ ನೀರು ಪಡೆಯಲು ಕಶ್ಟಪಡುತ್ತಿರುವ ಮಂದಿಯ ಬದುಕಿಗೆ ದಾರಿ ಮಾಡಿಕೊಡಲಿ.

(ಮಾಹಿತಿ ಸೆಲೆ: waterseer.org)

(ಚಿತ್ರ ಸೆಲೆ: ufunk.net, tecreview.itesm.mx)

ನಿಮಗೆ ಹಿಡಿಸಬಹುದಾದ ಬರಹಗಳು

ಅನಿಸಿಕೆ ಬರೆಯಿರಿ: